ಡಾಲ್ಫಿನ್ ಪಬ್ಲಿಕ್ ಸ್ಕೂಲ್ ನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ.


ಮಂದಾರ ನ್ಯೂಸ್ ಹರಿಹರ ನಂ1: ಹರಿಹರ ನಗರದ ಹೊರವಲಯದಲ್ಲಿ ಇರುವ ಡಾಲ್ಫಿನ್ ಪಬ್ಲಿಕ್ ಸ್ಕೂಲ್ ನಲ್ಲಿ ಅದ್ದೂರಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ D.K.ಶ್ವೇತ ಇವರು ಚಾಲನೆ ನೀಡಿದರು.
ಶಾಲೆಯ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

Post a Comment

0 Comments