ರಾಜ್ಯ ಬಿಜೆಪಿಗೆ ನೂತನ ಸಾರಥಿ,ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ...!



ಮಂದಾರ ನ್ಯೂಸ್ ,ಬೆಂಗಳೂರು :- ರಾಜ್ಯ ಬಿಜೆಪಿಗೆ ನೂತನ ಸಾರಥಿ ಕೊನೆಗೂ ಸಿಕ್ಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ನೇಮಕವಾಗಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ.ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ನಾನಾ ಪಟ್ಟುಗಳನ್ನು ಹಾಕುತ್ತಿರುವ ಕಮಲಪಡೆ, ಅದರ ಮೊದಲ ಹಂತವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷರ ಪಟ್ಟ ನೀಡಿದೆ ಎನ್ನಲಾಗಿದೆ.ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಜಯ ಗಳಿಸಲು ಸಾಧ್ಯವಾಗದಿರುವುದು ಹಾಗೂ ರಾಜ್ಯದಲ್ಲಿ ಅಧಿಕಾರ ತಪ್ಪಿ ಹೋಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಸದ್ಯ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗುವುದು ಬಹುತೇಕ ಪಕ್ಕಾ ಎಂದೂ ಈ ಹಿಂದೆ ಹೇಳಲಾಗುತ್ತಿತ್ತು. ಆದರೆ ಇದೀಗ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Post a Comment

0 Comments