ದಾವಣಗೆರೆ ಲೋಕಾಯುಕ್ತರು ನಾಳೆ ಜನರೊಂದಿಗೆ....

ಮಂದಾರ ನ್ಯೂಸ್, ಹರಿಹರ : ಭ್ರಷ್ಟ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗಿರುವ ದಾವಣಗೆರೆ ಜಿಲ್ಲಾ ಲೋಕಾಯುಕ್ತರು ನಾಳೆ ಹರಿಹರ ತಾಲೂಕಿನ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ದಾವಣಗೆರೆ ಜಿಲ್ಲಾ ಲೋಕಾಯುಕ್ತ ಎಸ್ಪಿ ಕೌಲಾಪುರೆ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ನೌಕರರ ಸಮ್ಮುಖದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮದ ಜೊತೆಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಒದಗಿಸಬೇಕಾದ ಸರ್ಕಾರಿ ಸೌಲತ್ತುಗಳು ಹಾಗೂ ಸರ್ಕಾರಿ ಕಾರ್ಯಗಳನ್ನು ಮಾಡಿಕೊಳ್ಳಲು ಸರ್ಕಾರಿ ಅಧಿಕಾರಿಗಳು ವಿಳಂಬ ತಂತ್ರ ಅನುಸರಿಸುವುದು, ಸೌಲತ್ತುಗಳನ್ನು ಸರ್ಕಾರ ನಿಗದಿಪಡಿಸಿದ ದಿನಾಂಕದ ಒಳಗೆ ಮಾಡಿಕೊಡದೆ ಇರುವುದು, ಸರ್ಕಾರದ ಸೌಲಭ್ಯಗಳನ್ನು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ಶುಲ್ಕವನ್ನು ಪಡೆಯುವುದು, ಸರ್ಕಾರದ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಲಂಚದ ಹಣಕ್ಕೆ ಬೇಡಿಕೆ ಇರುವುದು, ಈ ಮೇಲಿನ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಲು , ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಸಂಬಂಧ ದೂರುಗಳನ್ನು ಸ್ವೀಕರಿಸಲು ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ದಾವಣಗೆರೆಯವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮೀಪದ ಗುರುಭವನದಲ್ಲಿ ಬೆಳಗ್ಗೆ 11:30ಕ್ಕೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ನಿರೋಧಕ ಕಾಯ್ದೆ ಹಾಗೂ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಹಾಗೂ ತಾಲೂಕು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಸೂಕ್ತ ಅರಿವು ನೀಡಲಿದ್ದಾರೆ.

ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಯ ಕಾರ್ಯಕರ್ತರು, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಪಣತೊಟ್ಟಿರುವ ಯುವಕ -ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಮಂದಾರ ನ್ಯೂಸ್ ಸುದ್ದಿ ವಾಹಿನಿಯ ಕಳಕಳಿಯಾಗಿದೆ.

ನಾಳೆ ಈ ಒಂದು ಕಾರ್ಯಕ್ರಮದಲ್ಲಿ ದಾವಣಗೆರೆ ಲೋಕಾಯುಕ್ತರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಯಾವ ರೀತಿಯಲ್ಲಿ ದೂರನ್ನು ದಾಖಲಿಸಬೇಕು ಎಂಬುದರ ಬಗೆಯು ತಿಳಿಸಿಕೊಡಲಿದ್ದಾರೆ.

ನಾಳೆ ದಾವಣಗೇರಿ ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಅಧಿಕಾರಿಗಳಾದ 

ಶ್ರೀ ಎಮ್ ಎಸ್ ಕೌಲಾಪುರೆ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ದಾವಣಗೆರೆ.

ಶ್ರೀ ಮಧುಸೂದನ್ ಕರ್ನಾಟಕ ಲೋಕಾಯುಕ್ತ ದಾವಣಗೆರೆ. ಶ್ರೀ ಪ್ರಭು ಬಿ ಸೂರಿನ ಕರ್ನಾಟಕ ಲೋಕಾಯುಕ್ತ ದಾವಣಗೆರೆ. ಶ್ರೀ ರಾಷ್ಟ್ರಪತಿ ಹೆಚ್.ಎಸ್ ಕರ್ನಾಟಕ ಲೋಕಾಯುಕ್ತ ದಾವಣಗೆರೆ ಇವರುಗಳು ಉಪಸ್ಥಿತರಿರುವರು. ಇವರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ವೃಂದ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

Post a Comment

0 Comments