ಮಂದಾರ ನ್ಯೂಸ್ ,ಹರಿಹರ : ಕಳೆದ ಏಳು ವರ್ಷದಿಂದ ನೆನೆಗುದ್ದಿಗೆ ಬಿದ್ದಿರುವ ಬೀರೂರು - ಸಮ್ಮಸಗಿ ರಾಜ್ಯ ಹೆದ್ದಾರಿಯ ರಾಘವೇಂದ್ರ ಸ್ವಾಮಿ ಮಠದಿಂದ ಲೋಕೋಪಯೋಗಿ ಇಲಾಖೆಯ ಮುಂಭಾಗದ ದುರಸ್ತಿಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಕಳೆದ ಹತ್ತು ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹವನ್ನು ತಾಲೂಕು ದಂಡಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನಡೆಸುತ್ತಿದ್ದರು.
ಜಯ ಕರ್ನಾಟಕ ಸಂಘಟನೆಯ ಹೋರಾಟಕ್ಕೆ ಮಣಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿನ್ನೆ ದಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಇಲ್ಲದೆ ಜೆಸಿಬಿ ಮತ್ತು ಹಿಟಾಚಿ ಯಂತ್ರದ ಮೂಲಕ ಚಾಲನೆ ನೀಡಿದರು.
ಕಾಮಗಾರಿ ಆರಂಭವಾದ ಕೆಲವೇ ಗಂಟೆಯಲ್ಲಿ ಮತ್ತೆ ಕಾಮಗಾರಿ ನಿಂತು ಹೋಯಿತು. ಇದರಿಂದ ರೊಚ್ಚಿಗೆದ್ದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ರಸ್ತೆ ತಡೆ ನಡೆಸಿದರು.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6:00 ವರೆಗೆ ಜಯ ಕರ್ನಾಟಕ ಸಂಘಟನೆಯವರು ಹಾಗೂ ವಿವಿಧ ಸಂಘಟನೆಗಳ ಸಹಾಯದೊಂದಿಗೆ ರಸ್ತೆ ಅಭಿವೃದ್ಧಿಗಾಗಿ ಬಂದ್ಗೆ ಕರೆ ನೀಡಿದ್ದಾರೆ.
ಬೆಳಿಗ್ಗೆ 6:00 ಯಿಂದ ಸಂಜೆ 6:00 ವರೆಗೆ ಔಷಧಿ ಅಂಗಡಿಗಳನ್ನ ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಸಹಕರಿಸುವಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕ ಅಧ್ಯಕ್ಷರಾದ ಗೋವಿಂದ ಅವರು ನಗರದ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಾಧ್ಯಮ ಹೇಳಿಕೆಯನ್ನ ಬಿಡುಗಡೆಗೊಳಿಸಿದ್ದಾರೆ.
0 Comments