ಮಂದಾರ ನ್ಯೂಸ್, ಹರಿಹರ :"ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿ ಸಾರಥಿ ಗ್ರಾಮದಲ್ಲಿ 51 ಕೆಜಿ ತೂಕದ ಕಂಚಿನ ಪ್ರಭು ಶ್ರೀರಾಮಚಂದ್ರನ ವಿಗ್ರಹ ಪ್ರತಿಷ್ಠಾಪನೆ" ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ 22ರಂದು ವಿಶೇಷ ಪೂಜೆಯನ್ನ ಹಮ್ಮಿಕೊಂಡಿದ್ದು ಅದರಂತೆ ಹರಿಹರ ತಾಲೂಕು ಸಾರಥಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯ ಜೊತೆಗೆ 51 ಕೆಜಿ ತೂಕದ ಪ್ರಭು ಶ್ರೀರಾಮಚಂದ್ರ ,ಲಕ್ಷ್ಮಣ ,ಸೀತಾಮಾತೆ ಹಾಗೂ ಆಂಜನೇಯ ಸ್ವಾಮಿ ಇರುವ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮವು ನಡೆಯಲಿದೆ.
ಈ ಐತಿಹಾಸಿಕ ಕಾರ್ಯಕ್ರಮದ ಸಂದರ್ಭದಲ್ಲಿ ಬರುವಂತಹ ಎಲ್ಲಾ ಭಕ್ತಾದಿಗಳಿಗೆ ದಾಸೋಹದ ವ್ಯವಸ್ಥೆಯನ್ನು ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅವಿಸ್ಮರಣೀಯ ಕಾರ್ಯಕ್ರಮಕ್ಕೆ ಸಾಕ್ಷಿ ಆಗಬೇಕಾಗಿದೆ.
0 Comments