ಗುಂಡು ಹಾರಿಸಿಕೊಂಡ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೇಬಲ್.!!

ಮಂದಾರ ನ್ಯೂಸ್ ,ದಾವಣಗೆರೆ ; ಗುಂಡು ಹಾರಿಸಿಕೊಂಡು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ನಗರದ ಮಹಾನಗರ ಪಾಲಿಕೆ ಸ್ಟ್ರಾಂಗ್ ರೂಂನಲ್ಲಿ ಬಳಿ ನಡೆದಿದೆ 
 
ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಕಾನ್ಸ್ ಸ್ಟೇಬಲ್ ಎಂದು ತಿಳಿದು ಬಂದಿದ್ದು, ಸ್ಥಿತಿ ಗಂಭೀರ ಎಂದು ಹೇಳಲಾಗಿದೆ, ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದ ಪೊಲೀಸನ್ನೂ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿ ಗುರುಮೂರ್ತಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು, ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆಗೆ ಯತ್ನ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ, ಐಜಿಪಿ ತ್ಯಾಗರಾಜನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ..

Post a Comment

0 Comments