ಮಂದಾರ ನ್ಯೂಸ್ ,ದಾವಣಗೆರೆ; ಫೆ.14 : ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು, ಉದ್ದಿಮೆ ಘಟಕಗಳು, ಆಸ್ಪತ್ರೆಗಳು, ಕ್ಲಿನಿಕ್‍ಗಳು, ಸಾಮಿಲ್‍ಗಳು, ವಾಣಿಜ್ಯ ಉಪಯೋಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು, ಅಪಾರ್ಟ್ ಮೆಂಟ್‍ಗಳು ನಿಯಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಮತ್ತು ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
ಆದುದರಿಂದ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಮತ್ತು ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಿಸಿಕೊಳ್ಳದೆ ಇರುವಂತಹ ಹಾಗೂ ಸಮ್ಮತಿ ಪತ್ರ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಮಂಡಳಿಯವರು ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮಂಡಳಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದು.
ಮಂಡಳಿಯ ಸಮ್ಮತಿ ಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೆÉೀರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸಂಪರ್ಕಿಸಲು ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
=====
0 Comments