ಲೋಕಸಭಾ ಚುನಾವಣೆಗೆ ನಾಳೆ ದಿನಾಂಕ ಫಿಕ್ಸ್.!?

ಮಂದಾರ ನ್ಯೂಸ್,ನವದೆಹಲಿ:  ಭಾರಿ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ದಿನಾಂಕ ನಾಳೆ ಘೋಷಣೆಯಾಗಲಿದೆ.

ನಾಳೆ(ಮಾರ್ಚ್ 16) ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ ಎನ್ನಲಾಗಿದೆ.  ಕಳೆದ ಬಾರಿ 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಈ ಬಾರಿ ಯಾವಾಗ ಮತ್ತು ಎಷ್ಟು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ.

Post a Comment

0 Comments