ಮೈಸೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಕಲಿಗೆ ಸಿದ್ಧತೆ!?


ಮಂದಾರ ನ್ಯೂಸ್, ಮೈಸೂರು: ಶಿಕ್ಷಣ ಇತ್ತೀಚಿನ ದಿನದಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಪರೀಕ್ಷೆಗಳನ್ನು ಅನುಮಾನದಿಂದ ನೋಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಬೌದ್ಧಿಕ ಮಟ್ಟವನ್ನು ಅಳಿಯಬೇಕಾದ ಪರೀಕ್ಷೆಗಳು ಇಂದು ವ್ಯಾಪಾರದ ಕೇಂದ್ರಗಳಾಗಿವೆ. 

ಸಾಂಸ್ಕೃತಿಕ ನಗರಿ ಮೈಸೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅನುಕೂಲ ಮಾಡಿಕೊಡುತ್ತಿದ್ದಾರೆ ಎಂಬ ಆರೋಪ ಕೆಲವು ಪೋಷಕರಿಂದ ಕೇಳಿ ಬರುತ್ತಿದೆ.

ಖಾಸಗಿ ಶಾಲೆಗಳು ತಮ್ಮ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಮಗೆ ಬೇಕಾದಂತ ಪರೀಕ್ಷೆ ಕೇಂದ್ರಗಳನ್ನ ಆಯ್ಕೆ ಮಾಡಿಕೊಂಡು ಆ ಪರೀಕ್ಷೆ ಕೇಂದ್ರದ ಮೇಲ್ವಿಚಾರಕರನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ತಮ್ಮ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತಿದ್ದಾರೆ.
ಮೈಸೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕೆಲವು ಖಾಸಗಿ ಶಾಲೆಯ ಮಾಲೀಕರು ಆ ಕ್ಷೇತ್ರ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿ ಆರ್ ಪಿ ಗಳ ಮೂಲಕ ತಮ್ಮ ಮಕ್ಕಳು ಪರೀಕ್ಷೆಯನ್ನು ನಕಲು ಮಾಡಲು ಅನುಕೂಲ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

ಈಗಾಗಲೇ ಈ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪರೀಕ್ಷೆ ಕೇಂದ್ರಗಳಲ್ಲಿ ತಮ್ಮ ಶಾಲೆಯಿಂದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು ,ಪರೀಕ್ಷೆ ಆರಂಭವಾಗಿ ಸ್ವಲ್ಪ ಸಮಯದ ನಂತರ ಅವರನ್ನು ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟು ತಮ್ಮ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಶ್ನೆಗಳಿಗೆ ಉತ್ತರವನ್ನು ಬರೆಸುವ ಮೂಲಕ ನಕಲು ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನಮ್ಮ ಮಂದಾರ ನೀವು ಸುದ್ದಿವಾಹಿನಿಗೆ ಲಭ್ಯವಾಗಿದೆ .ಕೂಡಲೆ ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗುವ ಮೂಲಕ ಸಾಮೂಹಿಕವಾಗಿ ಪರೀಕ್ಷೆಯನ್ನು ನಕ್ಕಲು ಮಾಡಲು ಹೊರಟಿರುವ ಪರೀಕ್ಷಾ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಬೇಕಾಗಿದೆ.

ಈಗಾಗಲೇ ಮೈಸೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮಹಾರಾಜ ಸರ್ಕಾರಿ ಜೂನಿಯರ್ ಕಾಲೇಜು, ಜೆ ಎಸ್ ಎಸ್ ಬಾಲಕಿಯರ ಪ್ರೌಢಶಾಲೆ, ಶ್ರೀ ಕಾವೇರಿ ಕಾಂಪೋಸಿಟ್ ಪಿಯು ಕಾಲೇಜ್ ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅನುಕೂಲವಾಗುವ ಭೂಮಿಕೆಯನ್ನು ಸಿದ್ಧ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಪರೀಕ್ಷಾ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಟ್ಟು , ಪರೀಕ್ಷೆಗಳು ನಕಲು ಆಗದಂತೆ ನೋಡಿಕೊಳ್ಳಬೇಕು ಎಂಬುವುದು ನಮ್ಮ ಮಾಧ್ಯಮದ ಆಶಯವಾಗಿದೆ.

Post a Comment

0 Comments