ಸಾರ್ವಜನಿಕರ ಸ್ವತ್ತುಗಳನ್ನು ರಕ್ಷಣೆ ಮಾಡುವಲ್ಲಿ ಕೆ.ಎನ್ ಹಳ್ಳಿ ಅಭಿವೃದ್ಧಿ ಅಧಿಕಾರಿ ವಿಫಲ.!?

ಮಂದಾರ ನ್ಯೂಸ್: ಪ್ರತಿ ಸಾರ್ವಜನಿಕರ ಸ್ವತ್ತುಗಳನ್ನು ರಕ್ಷಣೆ ಮಾಡಬೇಕಾದ  ಜವಾಬ್ದಾರಿ ಸ್ಥಳೀಯ ಸಂಸ್ಥೆಗಳದ್ದು. ಆದರೆ ಕೆಲವು ಅಧಿಕಾರಿಗಳು ಈ ವಿಚಾರದಲ್ಲಿ ಅಸಡ್ಡೆಯನ್ನ ತೋರುತ್ತಿದ್ದಾರೆ. ಪರಿಣಾಮ ಸಾರ್ವಜನಿಕರ ಸ್ವತ್ತುಗಳು ಎಲ್ಲೋ ಒಂದು ಕಡೆ ಅನ್ಯರ ಪಾಲಾಗುತ್ತಿದೆ. 

ಹರಿಹರ ತಾಲೂಕು ಕಡರನಾಯಕನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರಂಗಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಸರಿಸುಮಾರು 3.90 ಲಕ್ಷಗಳಲ್ಲಿ ರೂಫ್ ಸೀಟನ್ನು ಸಹ ಹಾಕಲಾಗಿದೆ. 

 ಸಾರ್ವಜನಿಕರ ಸ್ವತ್ತುಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಗ್ರಾಮದ ಕೆಲ ನಾಗರಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಂಗಮಂದಿರದ ಸೌಂದರ್ಯವನ್ನು ಉಳಿಸುವ ನಿಟ್ಟಿನಲ್ಲಾದರೂ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಮುಂದಾಗಬೇಕು ಹಾಗೂ ಸಾರ್ವಜನಿಕರ ಸ್ವತ್ತುಗಳನ್ನು ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಅಭಿವೃದ್ಧಿ ಅಧಿಕಾರಿಗಳು ಮುಂದಿನ ದಿನದಲ್ಲಿ ಯಾವ ರೀತಿಯ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂಬುದು ಕಾದುನೋಡಬೇಕಾಗಿದೆ.

Post a Comment

0 Comments