ಎನ್.ಡಿ.ಎ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಜೆಡಿಎಸ್ ಪಕ್ಷದಿಂದ ದಿನಾಂಕ 6 ರಂದು ಅಧಿಕೃತ ಬೆಂಬಲ ಘೋಷಣೆ ಮತ್ತು ಕಾರ್ಯಕರ್ತರ ಸಭೆ.!



ಮಂದಾರ ನ್ಯೂಸ್, ಹರಿಹರ: ಈಗಾಗಲೇ ಜನತಾದಳ (ಜಾತ್ಯತೀತ) ಪಕ್ಷ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಬೆಂಬಲವನ್ನು ಘೋಷಣೆ ಮಾಡಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಎನ್.ಡಿ.ಎ (ಬಿಜೆಪಿ )ಅಭ್ಯರ್ಥಿಯಾಗಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರು ಸ್ಪರ್ಧಿಸುತ್ತಿದ್ದು ಅವರಿಗೆ ಹರಿಹರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಶ್ರೀ ಎಚ್.ಎಸ್ ಅವರು ತಮ್ಮ ಪಕ್ಷದ ಮುಖಂಡರು ,ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳೊಂದಿಗೆ ದಿನಾಂಕ 6/4/2024 ರಂದು ನಗರದ ಸಿದ್ಧೇಶ್ವರ್ ಪ್ಯಾಲೇಸ್ ಸಭಾಂಗಣದಲ್ಲಿ ಅಧಿಕೃತವಾಗಿ ಬೆಂಬಲವನ್ನು ಘೋಷಣೆ ಮಾಡಲಿದ್ದಾರೆ. ಅಂದೆ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ,ವಿವಿಧ ಘಟಕದ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು, ಮಹಿಳೆಯರು, ಯುವಕರು ,ಅಭಿಮಾನಿಗಳು ಹಾಗೂ ಕ್ಷೇತ್ರದ ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಹೆಚ್. ಎಸ್ ಶಿವಶಂಕರ್ ಅವರು ಎಲ್ಲರಿಗೂ ಸ್ವಾಗತವನ್ನು ಕೋರಿದ್ದಾರೆ.

Post a Comment

0 Comments