ಮಂದಾರ ನ್ಯೂಸ್ ಹರಿಹರ: ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಮಹಾ ಗಣಪತಿ ಹರಿಹರ ಸಮಿತಿಯ ಸಂಯುಕ್ತಾಶ್ರಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾ ಗಣಪತಿಯ ವಿಸರ್ಜನೆ ಹಾಗೂ ಬೃಹತ್ ಶೋಭಾಯಾತ್ರೆ ಇದೇ ದಿನಾಂಕ 29/ 9/ 2024 ಭಾನುವಾರದಂದು 10 ಗಂಟೆಗೆ ಆರಂಭವಾಗಲಿದ್ದು ಈ ಭಾರಿ ವಿಶೇಷ ಬೃಹತ್ ಶೋಭಾಯಾತ್ರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ , ರಮೇಶ್ ಜಾರಕಿಹೊಳಿ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ ಇವರು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಹರಿಹರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಿಪಿ ಹರೀಶ್, ಮಾಜಿ ಸಂಸದರಾದ ಜಿಎಂ ಸಿದ್ದೇಶ್ವರ್, ಮಾಜಿ ಶಾಸಕರಾದ ಹೆಚ್ ಎಸ್ ಶಿವಶಂಕರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಪೂಜಾರ್ ಸೇರಿದಂತೆ ಅನೇಕ ಗಣ್ಯರು ಈ ಬಾರಿಯ ಗಣೇಶ ವಿಸರ್ಜನೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments