ಜಯ ಕರ್ನಾಟಕ ಸಂಘಟನೆಯ ಹೋರಾಟಕ್ಕೆ ಮಣಿದ ಸರ್ಕಾರ.!? ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಚಾಲನೆ.!!

 
ಮಂದಾರ ನ್ಯೂಸ್ : ಹರಿಹರ ನಗರದ ಗಾಂಧಿ ಮೈದಾನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ವಾಣಿಜ್ಯ ಮಳಿಗೆಗಳ ಅವಧಿ ಮುಗಿದಿದ್ದು ಮರು ಹರಾಜು ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಗೋವಿಂದ ಅವರ ನೇತೃತ್ವದಲ್ಲಿ ಕಳೆದ 152 ದಿನಗಳಿಂದ ನಗರದ ಗಾಂಧಿ ವೃತ್ತದಲ್ಲಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದರು.

ಈ ಹೋರಾಟದ ಮಧ್ಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಹಾಗೂ ದಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಕಣ್ಣಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಅರೆಬೆತ್ತಲೆ ಹೋರಾಟವನ್ನು ಸಹ ನಡೆಸಿದ್ದರು.

ಕಳೆದ ಎರಡು ದಿನಗಳ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಆಯುಕ್ತರಾದ ಆರ್ ಚೇತನ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ ಗೋವಿಂದರಾಜ್ ಅವರಿಗೆ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ಬಿ ಎನ್ ಜಗದೀಶ್ ಅವರು ಹರಿಹರ ತಾಲೂಕು ಘಟಕದ ಅಧ್ಯಕ್ಷರಾದ ಗೋವಿಂದ ಅವರ ಹಾಗೂ ಸಂಘಟನೆಯ ಇತರೆ ಕಾರ್ಯಕರ್ತರ ನೇತೃತ್ವದಲ್ಲಿ ಮನವಿಯನ್ನು ನೀಡಿದ್ದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಕೆ ಗೋವಿಂದರಾಜ್ ಅವರು ಮನವಿಯನ್ನು ಸ್ವೀಕರಿಸಿ ಕೂಡಲೇ ಹರಾಜು ಪ್ರಕ್ರಿಯೆ ನಡೆಸಲು ಸೂಚನೆಯನ್ನು ನೀಡುತ್ತೇನೆ ಎಂಬ ಭರವಸೆಯನ್ನು ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಹರಿಹರ ತಾಲೂಕು ಕಟಕದ ಅಧ್ಯಕ್ಷರಿಗೆ ನೀಡಿದ್ದರು. 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅವರು ತಮ್ಮ ಮಾತಿನಂತೆ ನಡೆದುಕೊಂಡ ಪರಿಣಾಮ ಇಂದು ಹರಿಹರ ನಗರದ ಗಾಂಧಿ ಮೈದಾನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಮರು ಹರಾಜು ಪ್ರಕ್ರಿಯೆ ನಡೆಸಲು ಇಲಾಖೆಯ ತಾಲೂಕು ಉಸ್ತುವಾರಿ ಅಧ್ಯಕ್ಷರು ಇಂದು ಅರ್ಜಿಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದೆ 8ನೇ ತಾರೀಖಿನವರೆಗೂ ಅರ್ಜಿಯನ್ನು ನೀಡಲಾಗುವುದು .ಸದರಿ ಅರ್ಜಿಯ ಶುಲ್ಕವಾಗಿ 500 ರೂಪಾಯಿಯನ್ನು ನೀಡಬೇಕು. ಅರ್ಜಿಯನ್ನು ಸಲ್ಲಿಸಿ ಹರಾಜಿನಲ್ಲಿ ಪಾಲ್ಗೊಳ್ಳುವರು ಒಂದು ಲಕ್ಷ ರೂಪಾಯಿ ಠೇವಣೆ ಮೊತ್ತವನ್ನು ನೀಡಬೇಕು. ಹತ್ತನೇ ತಾರೀಕಿನ ಒಳಗೆ ಅರ್ಜಿಗಳನ್ನು ತಾಲೂಕು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕು. 13ನೇ ತಾರೀಖಿನಂದು ವಾಣಿಜ್ಯ ಮಳಿಗೆಗಳನ್ನು ಹರಾಜು ಹಾಕಲಾಗುವುದು ಎಂಬ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಇಂದು ಹೊರಡಿಸಿರುವ ಆದೇಶದಿಂದ ಜಯ ಕರ್ನಾಟಕ ಸಂಘಟನೆಯ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಸುದೀರ್ಘ ಹೋರಾಟದ ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ನೇರ ಕಾರಣ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಗೋವಿಂದ. ಈ ವಿಚಾರದಲ್ಲಿ ಗೋವಿಂದ ಅವರು ಹೋರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇತಿಹಾಸದ ಪುಟದಲ್ಲಿ ಹೋರಾಟದ ದಿಟ್ಟ ಹೆಜ್ಜೆಯ ಗುರುತುಗಳನ್ನು ದಾಖಲಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಹಿಂದೆಯೂ ಎರಡು ಬಾರಿ ಗಾಂಧಿ ಮೈದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಅರ್ಜಿಗಳನ್ನು ವಿತರಣೆ ಮಾಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಸಂಗ್ರಹಿಸಿಕೊಂಡಿತ್ತು. ಹರಾಜು ಪ್ರಕ್ರಿಯೆ ನಡೆಸದೇ ಯಾರದೋ ಒತ್ತಡಕ್ಕೆ ಮಣಿದು ಹರಾಜು ಪ್ರಕ್ರಿಯೆಯನ್ನು ಅರ್ಧಕ್ಕೆ ಕೈ ಬಿಡಲಾಯಿತು. ಈಗ ಮತ್ತೆ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಪ್ರತಿ ಅರ್ಜಿಗೆ 500 ರೂಪಾಯಿ ಪಡೆಯುತ್ತಿದ್ದಾರೆ. ಈ ಬಾರಿಯೂ ಇದೇ ರೀತಿ ಕೊನೆ ಹಂತದಲ್ಲಿ ಹರಾಜು ಪ್ರಕ್ರಿಯೆ ನಡೆಸದೆ ಒತ್ತಡಕ್ಕೆ ಮಣಿಯುತ್ತಾರೋ? ಅಥವಾ ಈ ಬಾರಿ ಹರಾಜು ಪ್ರಕ್ರಿಯೆಯನ್ನು ನಡೆಸುತ್ತಾರೋ? ಕಾದುನೋಡಬೇಕಾಗಿದೆ.

ಕೊನೆಗೂ ಜಯ ಕರ್ನಾಟಕ ಸಂಘಟನೆಯ ಹೋರಾಟಕ್ಕೆ ಜಯ ಸಿಕ್ಕಂತಾಗಿದ್ದು ಹರಾಜು ಪ್ರಕ್ರಿಯೆ ಮುಗಿದ ಕೂಡಲೇ ಗೋವಿಂದ ಅವರ ಹೋರಾಟ ಹೊಸ ಇತಿಹಾಸದ ಪುಟ ಸೇರಬಹುದು.

Post a Comment

0 Comments