ದಾವಣಗೆರೆ (ಕರ್ನಾಟಕ ವಾರ್ತೆ)ಜುಲೈ.17: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಜುಲೈ 18 ರ ಮಧ್ಯಾಹ್ನ 3.30 ಕ್ಕೆ ಪುಣೆಯ ಪರಿಸರ ತಜ್ಞ ವಿನೋದ್ ಬೊದನ್‌ಕರ್ ಅವರಿಂದ ಅಧಿಕಾರಿಗಳಿಗೆ, ಎಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಮತ್ತು ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ “ಪ್ಲಾಸ್ಟಿಕ್ ಸಂಗ್ರಹಣೆ, ವಿಲೇವಾರಿ ಹಾಗೂ ಮರುಬಳಕೆಯ” ಕುರಿತು ವೆಬಿನಾರ್ ಆಯೋಜಿಸಲಾಗಿದೆ.
ನಗರಕ್ಕೆ ಹತ್ತಿರವಿರುವ ಎಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರಯ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆಗಳ ಆಸಕ್ತ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಭಾಗವಹಿಸುವುದು, ಮತ್ತು ಇತರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು ಝೂಮ್ ಮೂಲಕ ಭಾಗವಹಿಸಬೇಕು.
ತಾಲ್ಲೂಕು ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆಯಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿನ ಜೂಮ್ ಮೀಟಿಂಗ್ ಮೂಲಕ ಹಾಜರಾಗಬೇಕು. ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಇಂಜಿನಿಯರ್, ಆರೋಗ್ಯಾಧಿಕಾರಿಗಳು ತಮ್ಮ ಸ್ಥಳೀಯ ಸಂಸ್ಥೆಗಳ ಮೂಲಕ ಝೂಮ್ ಮೀಟಿಂಗ್ ಮೂಲಕ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗAಗಾಧರಸ್ವಾಮಿ ತಿಳಿಸಿದ್ದಾರೆ.
0 Comments