ಮಂದಾರ ನ್ಯೂಸ್ : ಐದು ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಡ್ಡಾಯ ವಾಗಿ ವರ್ಗಾವಣೆ ಮಾಡತಕ್ಕದ್ದು ಎಂದು ಕರ್ನಾಟಕ ಸರ್ಕಾರದ ಸಚಿವಾಲಯವು ಹೊರಡಿಸಿರುವ ಅಧಿಸೂಚನೆ...
ಕಳೆದ ಐದು ವರ್ಷದಿಂದ ಒಂದೇ ತಾಲೂಕು ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಾಯಕ (ಗ್ರೇಡ್ 1 ಮತ್ತು 2 )ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2024 ಜಾರಿಗೆ ಬಂದ ನಂತರ ಒಂದು ಬಾರಿಗೆ ಐದು ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಗ್ರಾಮ ಪಂಚಾಯತಿಗಳ ಎಲ್ಲಾ ಅಭಿವೃದ್ಧಿ ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಹರಿಹರ ತಾಲೂಕು ಪಂಚಾಯತ್ ವ್ಯಾಪ್ತಿಯ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಒಂದೇ ಕಡೆ ಒಂದೇ ಪಂಚಾಯತಿಗಳಲ್ಲಿ ಐದು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸುತ್ತಿದ್ದಾರೆ ರಾಜ್ಯ ಸರ್ಕಾರದ ಆದೇಶದಂತೆ ಇವರು ಸಹ ವರ್ಗಾವಣೆಯಾಗುವುದು ನಿಶ್ಚಿತ.
ಈಗಾಗಲೇ ಹರಿಹರ ತಾಲೂಕು ಪಂಚಾಯತಿ ವ್ಯಾಪ್ತಿಯ 23 ಗ್ರಾಮ ಪಂಚಾಯತಿಗಳು ಬಹುತೇಕ ಅಭಿವೃದ್ದಿ ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳು ಅಭಿವೃದ್ಧಿ ಕಾಣುತ್ತಿಲ್ಲ. ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸಮಯದ ಪರಿಪಾಲನೆ ಮಾಡುತ್ತಿಲ್ಲ. ತಮಗೆ ಸಂಬಂಧವಿಲ್ಲದ ಗ್ರಾಮ ಪಂಚಾಯತಿಯಲ್ಲಿ ಮೂಗು ತೋರಿಸುವ ಅಭಿವೃದ್ಧಿ ಅಧಿಕಾರಿಗಳೇ ಹೆಚ್ಚಾಗಿದ್ದಾರೆ. ಕೆಲವು ಅಭಿವೃದ್ಧಿ ಅಧಿಕಾರಿಗಳು ಕೆಲವೊಂದು ಗ್ರಾಮ ಪಂಚಾಯತಿಗಳಿಗೆ ಅವರಿಗೆ ಬೇಕಾದ ಮಾಹಿತಿಗಳನ್ನು ಪಡೆಯಲು ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸಲು ಪಂಚಾಯತ್ ರಾಜ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿಗಳ ಸಹಾಯವನ್ನು ಪಡೆಯುತ್ತಿದ್ದಾರೆ ಎಂಬ ಆರೋಪವು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಹಾಗೂ ಹೊರಡಿಸಿರುವ ಆದೇಶ ಪಂಚಾಯತಿಗಳ ಅಭಿವೃದ್ಧಿಗೆ ಸಹಾಯವಾಗುವ ಸಾಧ್ಯತೆ ಹೆಚ್ಚಾಗಿದೆ.
ರಾಜ್ಯ ಸರ್ಕಾರ ಹೊರಡಿಸಿದ ಪ್ರಕಟಣೆಯ ಪ್ರತಿ ಈ ನಮ್ಮ ಮಂದಾರ ನ್ಯೂಸ್ ಸುದ್ದಿ ವಾಹಿನಿಯಲ್ಲಿ ಪ್ರಕಟಿಸಲಾಗಿದೆ.
0 Comments