ಮಂದಾರ ನ್ಯೂಸ್, ಹರಿಹರ: ಹರಿಹರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದು, ಮದ್ಯ ಮಾರಾಟದಿಂದ ಉಂಟಾಗುತ್ತಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತ ಮಹಿಳೆಯರು ಅಕ್ರಮ ಮದ್ಯ ಮಾರಾಟ ಬಂದ್ ಮಾಡಿಸುವಂತೆ ರಾಜಕಾರಣಿಗಳಿಗೆ ಮೊರೆ ಇಡುತ್ತಿದ್ದಾರೆ.
‘ಕಾನೂನು ಬಾಹಿರವಾಗಿ ಮದ್ಯ ಮಾರಾಟದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದು ಅಕ್ರಮ ವ್ಯವಹಾರಕ್ಕೆ ಅವರೇ ಸಾಥ್ ನೀಡುತ್ತಿದ್ದಾರೆ’ ಎಂದು ಮಹಿಳೆಯರು, ರೈತರು ಆರೋಪಿಸಿದ್ದಾರೆ.
ಹರಿಹರ ತಾಲೂಕಿನ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ ಹಿರೇಮಠ ಇವರು ಅಕ್ರಮ ಮಧ್ಯ ಮಾರಾಟಗಾರರೊಂದಿಗೆ ತೆರೆ ಮರೆಯಲ್ಲಿ ಕೈಜೋಡಿಸಿದ್ದಾರೆ ಎಂಬ ಪ್ರಬಲ ಆರೋಪವು ಕೇಳಿ ಬಂದಿದೆ. ಇವರಿಗೆ ಅಕ್ರಮ ಮಧ್ಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದರೆ ಇವರು ಮೇಳಾಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿಲ್ಲ. ಮೇಲಾಗಿ ಮೇಲಧಿಕಾರಿಗಳ ವಿರುದ್ಧವೇ ಸಾರ್ವಜನಿಕವಾಗಿ ಕೆಲವರು ಒಂದಿಗೆ ಮಾತನಾಡುತ್ತಿದ್ದಾರೆ. ಇವರ ಅನುಕೂಲಕ್ಕೆ ತಕ್ಕಂತೆ ಕಚೇರಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಹೇಳಿ ಬರುತ್ತಿದೆ. ಹಲವು ವರ್ಷದಿಂದ ಹರಿಹರದ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಈಗಾಗಲೇ ತಾಲೂಕಿನ ಯಾವ ಯಾವ ಗ್ರಾಮದಲ್ಲಿ ಯಾರು ಯಾರು ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಇವರ ಬರೇ ಸಂಪೂರ್ಣವಾಗಿ ಇದೆ. ಆದರೂ ಸಹ ಇವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿರುವ ಇಂದಿನ ಮರ್ಮವೇನು?
ಇನ್ನು ಕಚೇರಿಗೆ ಹೋದ ಸಂದರ್ಭದಲ್ಲಿ ಅಲ್ಲಿ ಅಬಕಾರಿ ನಿರೀಕ್ಷಕರು ಇರುವುದಿಲ್ಲ. ಅವರಿಗೆ ಎರಡೆರಡು ತಾಲೂಕುಗಳನ್ನು ವಹಿಸಿಕೊಟ್ಟಿದ್ದಾರೆ ಎಂಬ ಉತ್ತರ ಬರುತ್ತದೆ. ಮತ್ತೊಂದು ಕಡೆ ಸಿಬ್ಬಂದಿಗಳ ಕೊರತೆ ಇದೆ ಎನ್ನುತ್ತಾರೆ. ಹಾಗಾದರೆ ಇವರು ಸರ್ಕಾರ ವಾಹನದಲ್ಲಿ ಹೋಗಿ ಬರುವುದಾದರೂ ಎಲ್ಲಿಗೆ ಎಂಬ ಪ್ರಶ್ನೆ ಕಾಡುತ್ತಿದೆ.
ಹರಿಹರ ತಾಲೂಕಿನಾದ್ಯಂತ ಅಕ್ರಮ ಮಧ್ಯ ಮಾರಾಟ ನಿಲ್ಲಬೇಕಾದರೆ ಹಲವು ವರ್ಷದಿಂದ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ ಹಿರೇಮಠ ಇವರನ್ನು ವರ್ಗಾವಣೆ ಮಾಡಿದರೆ ಸಾಧ್ಯವಾದಷ್ಟು ಮಟ್ಟಿಗೆ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಸಾರ್ವಜನಿಕರು.
ತಾಲ್ಲೂಕಿನ ವಾಸನ ,ಎಳೆಹೊಳೆ, ದೊಳೆಹೊಳೆ, ರಾಜನಹಳ್ಳಿ ,ನಾಗೇನಹಳ್ಳಿ, ಬೆಳ್ಳೋಡಿ, ಸಾರಥಿ ,ಚಿಕ್ಕಬಿದರಿ, ಪಾಮೆನಹಳ್ಳಿ,ಹಾಲಿವಾಣ, ಹೊಳೆಸಿರೆಗೆರೆ, ಕೊಂಡಜ್ಜಿ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳು ಸೇರಿದಂತೆ ಇನ್ನೂ ಹಲವು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ಮಲೆಬೆನ್ನೂರು ಹೋಬಳಿಯ ಕೆಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಮಿತಿ ಮೀರಿದೆ.
ನಮ್ಮ ಮಕ್ಕಳು ಮದ್ಯದ ಚಟಕ್ಕೆ ಬಿದ್ದು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುವುದರ ಜತೆಗೆ ಸಣ್ಣ ವಯಸ್ಸಿನಲ್ಲೇ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳೆದ ಎರಡು ತಿಂಗಳ ಹಿಂದೆ ನಡೆದ ಅಧಿಕಾರಿಗಳು ಮತ್ತು ರೈತ ಮುಖಂಡರ ಸಭೆಯಲ್ಲಿ ರೈತ ಸಂಘಟನೆಯ ಕಾರ್ಯಕರ್ತರು ಸಂಬಂಧಿಸಿದ ಮೇಲಾಧಿಕಾರಿಗಳ ಗಮನಕ್ಕೆ ತರುವ ಸಂದರ್ಭದಲ್ಲಿ ತಮ್ಮ ಅಳಲನ್ನು ತೋಡಿಕೊಂಡರು ಕೂಡಲೇ ಅಕ್ರಮ ಮದ್ಯ ಮಾರಾಟ ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದರು.
ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕನಿಷ್ಠ 4 ರಿಂದ 5 ಅಕ್ರಮ ಮದ್ಯದ ಮಾರಾಟ ಅಂಗಡಿಗಳಿವೆ. ಅನುಮತಿ ಪಡೆದ ಮದ್ಯದಂಗಡಿಯ ಮಾಲೀಕರೇ ಸುತ್ತಮುತ್ತಲಿನ ಹಳ್ಳಿಗಳಿಗೆ ಅಕ್ರಮ ಮದ್ಯ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದಾರೆ. ಕೆಲವರು ಬಾರ್‌ಗಳಿಂದ ಖರೀದಿಸಿ, ಹಳ್ಳಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ಹೀಗೆ ಮದ್ಯವು ಸ್ಥಳೀಯವಾಗಿ ಸಿಗುವುದರಿಂದ ಹೆಚ್ಚಿನ ಜನರು ಕುಡಿತಕ್ಕೆ ದಾಸರಾಗುವುದರಿಂದ ಆರೋಗ್ಯದ ಮೇಲೆಯೂ ದುಷ್ಪರಿಣಾಮ ಬೀರುತ್ತಿದೆ’ ಎಂದು ಮಹಿಳೆಯರು ಅಳಲು ತೋಡಿಕೊಂಡರು.
‘ಹಳ್ಳಿಗಳಲ್ಲೇ ಎಲ್ಲಾ ಸಮಯದಲ್ಲೂ ಮದ್ಯ ಸಿಗುವುದರಿಂದ ಯುವಕರು ಸೇರಿ ಹೆಚ್ಚಿನ ಜನರು ಕುಡಿತದ ಚಟಕ್ಕೆ ದಾಸರಾಗುವುದರಿಂದ ಚಿಕ್ಕವಯಸ್ಸಿನಲ್ಲೇ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ರೈತರ ಸಂಘಟನೆಯ ಕಾರ್ಯಕರ್ತರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರು.
‘ಇತ್ತಿಚೆಗೆ ಗ್ರಾಮೀಣದ ಪ್ರದೇಶಗಳಲ್ಲಿ ದಿನದ 24 ಗಂಟೆಯೂ ಮದ್ಯ ಸಿಗುತ್ತಿರುವುದರಿಂದ ಬಹುತೇಕ ಕೂಲಿ ಕಾರ್ಮಿಕರು ತಮ್ಮ ಒಂದು ದಿನದ ಕೂಲಿ ಹಣದ ಅರ್ಧದಷ್ಟನ್ನು ಮದ್ಯ ಸೇವನೆಗೆ ವಿನಿಯೋಗಿಸುತ್ತಿದ್ದಾರೆ. ಇದರಿಂದಾಗಿ ಮನೆಗಳಲ್ಲಿ ಜಗಳ ಉಂಟಾಗಿ ಇಡೀ ಕುಟುಂಬವೇ ಬೀದಿ ಪಾಲು ಆಗುತ್ತಿದೆ’ ಎಂದರು.
ಕೂಡಲೇ ಹರಿಹರ ತಾಲೂಕಿನಾದ್ಯಂತ ಅಕ್ರಮ ಮಧ್ಯ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಹಾಗೂ ಅಬಕಾರಿ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಬೇಕಾಗಿದೆ. ಅಕ್ರಮ ಮಧ್ಯ ಮಾರಾಟಕ್ಕೆ ಸಾತ್ ನೀಡುತ್ತಿರುವ ಅಬಕಾರಿ ಇಲಾಖೆಯ ಸಿಬ್ಬಂದಿಗಳನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕಾಗಿದೆ.
0 Comments