ಕೊಡಿಯಾಲ - ಹೊಸಪೇಟೆ: ಸಿ ಎಲ್ - 4 ಮದ್ಯ ಅಂಗಡಿಗೆ ಅನುಮತಿ, ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ, ಲೋಕಾಯುಕ್ತ ತನಿಖೆಗೆ ಆಗ್ರಹ.


ಮಂದಾರ ನ್ಯೂಸ್, ರಾಣೇಬೆನ್ನೂರು: ಕೊಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೀರೂರು - ಸಮ್ಮಸಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ನೂತನವಾಗಿ ಸಿ ಎಲ್-  4 ಮಧ್ಯದ ಅಂಗಡಿಯನ್ನು ಆರಂಭ ಮಾಡಲಾಗಿದೆ. ಈಗಾಗಲೇ ಈ ಭಾಗದಲ್ಲಿ ಎರಡು ಮಧ್ಯದ ಅಂಗಡಿಗಳು ಇದೆ. ಆದರೂ ಮತ್ತೊಂದು ಮದ್ಯದ ಅಂಗಡಿಗೆ ಅಬಕಾರಿ ಇಲಾಖೆ ಅನುಮತಿ ನೀಡಿದೆ.

ಕೇವಲ ನಾಲ್ಕರಿಂದ ಐದು ಸಾವಿರ ಜನಸಂಖ್ಯೆಯನ್ನು ಹೊಂದಿರುವ ಕೊಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂರನೇ ಒಂದು ಭಾಗದಷ್ಟು ಪರಿಶಿಷ್ಟ- ಜಾತಿ ಹಾಗೂ ಪರಿಶಿಷ್ಟ ಪಂಗಡ ಜನರು ವಾಸ ಮಾಡುತ್ತಿದ್ದಾರೆ.
ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜನರು ವಾಸ ಮಾಡುವ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮ ಮತ್ತು ಜನರ ಮೇಲೆ ಕೆಟ್ಟ ರೀತಿಯಲ್ಲಿ ಪ್ರಭಾವ ಬೀರುವ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಬಾರದು ಎಂಬ ನಿಯಮ ಸಂವಿಧಾನದಲ್ಲಿ ಇದೆ. ಆದರೂ ಅಬಕಾರಿ ಇಲಾಖೆಯ ಅಧಿಕಾರಿಗಳು ಸರ್ಕಾರದ ಹಾಗೂ ಸಂವಿಧಾನದಲ್ಲಿರುವ ನಿಯಮಗಳನ್ನು ಉಲ್ಲಂಘಿಸಿ ಕೊಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂರನೇ ಮಧ್ಯದ ಅಂಗಡಿಗೆ ಅನುಮತಿಯನ್ನು ನೀಡಿದ್ದಾರೆ.

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸಿಎಲ್ -4 3ನೇ ಮದ್ಯದ ಅಂಗಡಿಗೆ ಅನುಮತಿ ನೀಡುವುದನ್ನು ವಿರೋಧಿಸಿ ನಿನ್ನೆ ದಿನ ಡಾಕ್ಟರ್ ಬಿಆರ್ ಅಂಬೇಡ್ಕರ್ ಯುವಕ ಸಂಘದ ತಾಲೂಕು ಅಧ್ಯಕ್ಷರಾದ ಉಮೇಶ್ ಇವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು. 

ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಉಮೇಶ ಅವರು ಕೊಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿ ಎಲ್ - 4 ಮದ್ಯದ ಅಂಗಡಿಗೆ ಅಬಕಾರಿ ಇಲಾಖೆಯವರು ಅನುಮತಿಯನ್ನು ನೀಡಿದ್ದಾರೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರವನ್ನು ನಡೆಸಿ ಈ ಮಧ್ಯದ ಅಂಗಡಿಗೆ ಅಬಕಾರಿ ಇಲಾಖೆಯ ಡೆಪ್ಯುಟಿ ಕಮಿಷನರ್ ಅವರು ಅನುಮತಿಯನ್ನು ನೀಡಿದ್ದಾರೆ. ಕೂಡಲೆ ಲೋಕಾಯುಕ್ತರು ತನಿಖೆ ನಡೆಸಬೇಕು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅನುಮತಿ ನೀಡಿರುವ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ನಾವು ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ. ಕೂಡಲೇ ಲೋಕಾಯುಕ್ತರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕೊಂಡು ತನಿಖೆ ನಡೆಸಬೇಕು. ನಾವು ಸಹ ಲೋಕಾಯುಕ್ತರಿಗೆ ದೂರು ನೀಡುತ್ತೇವೆ. ಕೂಡಲೇ ಅವರು ತನಿಖೆ ನಡೆಸಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಜನರ ಮೇಲೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. 
ಅಂಗಡಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಘಟನೆಯ ತಾಲೂಕು ಅಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ಸ್ಥಳೀಯ ಗ್ರಾಮಸ್ಥರು ಮನವೊಲಿಸಿ ಸಂಬಂಧಿಸಿದ ಇಲಾಖೆಯ ಮುಂಭಾಗದಲ್ಲಿ ಬೇಕಾದರೆ ಪ್ರತಿಭಟನೆ ನಡೆಸಿ ಎಂದು ತಿಳುವಳಿಕೆ ಹೇಳಿದರು. 

ಗ್ರಾಮಸ್ಥರ ಮಾತಿಗೆ ಗೌರವ ನೀಡಿ ಸಂಘಟನೆಯ ಕಾರ್ಯಕರ್ತರು ಕೆಲವೊಂದು ಪೋಲಿಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ತದನಂತರ ಅಬಕಾರಿ ಇಲಾಖೆಯ ಶೇಖರಪ್ಪ ಇವರಿಗೆ ಮನವಿ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Post a Comment

0 Comments