ನವಂಬರ್ ಅಂತ್ಯಕ್ಕೆ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಬೇಳೂರು ಅವರಿಗೆ ಮಂತ್ರಿ ಪಟ್ಟ ಸಿಗುವ ಸಾಧ್ಯತೆ.!

ಮಂದಾರ ನ್ಯೂಸ್ : ಸದ್ಯ ದೇಶದ ಗಮನ ಬಿಹಾರ ಚುನಾವಣೆ ಕಡೆ ತಿರುಗಿದೆ.ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ನವಂಬರ್ ತಿಂಗಳ ಅಂತ್ಯದಲ್ಲಿ ಸುಮಾರು 15ಕ್ಕೂ ಹೆಚ್ಚು ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಾಗಿದೆ. ಸಿದ್ದರಾಮಯ್ಯನವರ ಮಂತ್ರಿ ಮಂಡಲದಲ್ಲಿ ಹೊಸ ಮುಖಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ನವಂಬರ್ ಅಂತ್ಯದಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವುದು ನಿಚ್ಚಲವಾಗುತ್ತಿದ್ದಂತೆ ರಾಜಕೀಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿದೆ. 

ಸಿದ್ದರಾಮಯ್ಯನವರ ಹೊಸ ಸಚಿವ ಸಂಪುಟದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರಿಗೆ ಅವಕಾಶ ಸಿಗಲಿದ್ದು ಅವರಿಗೆ ಕೃಷಿ ಖಾತೆ ನೀಡಲಾಗುತ್ತದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.
ಈಗಾಗಲೇ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು. ಪಕ್ಷದ ನಾಯಕರಲ್ಲೂ ಉತ್ತಮವಾದ ಬಾಂಧವ್ಯವನ್ನು ಹೊಂದಿದ್ದಾರೆ. 

ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಅಂದರೆ ನವಂಬರ್ ಎರಡನೇ ವಾರದಲ್ಲಿ ರಾಜ್ಯ ನಾಯಕತ್ವ ಹೈಕಮಾಂಡ್ ನೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ಮಾತುಕತೆ ನಡೆಸಲಿದ್ದು, ಸಂಪುಟ ವಿಸ್ತರಣೆಯ ಕಸರತ್ತು ಆರಂಭಿಸಲಿದ್ದಾರೆ. ತನ್ಮೂಲಕ ಚಳಿಗಾಲದ ಅಧಿವೇಶನದಲ್ಲಿ ಹೊಸ ಮುಖಗಳು ಸದನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮಾಜಿ ಸಭಾಪತಿಗಳು ಹಾಗೂ ಮಾಜಿ ಸಚಿವರಾಗಿ ಕಾರ್ಯನಿರ್ವಹಿಸಿದ ಕಾಗೋಡು ತಿಮ್ಮಪ್ಪನವರ ನಂತರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಒಂದು ಉತ್ತಮ ಖಾತೆ ದೊರಕುವ ಸಾಧ್ಯತೆ ನಿಚ್ಚಳವಾಗಿದೆ. 

ಈಗಾಗಲೇ ಗೋಪಾಲಕೃಷ್ಣ ಬೇಳೂರು ಅವರ ಅಭಿಮಾನಿಗಳು ಹಲವು ರೀತಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ತಮ್ಮ ನಾಯಕರಿಗೆ ಮಂತ್ರಿ ಪಟ್ಟ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Post a Comment

0 Comments