ರಸ್ತೆ ದುರಸ್ತಿಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ.


ಮಂದಾರ ನ್ಯೂಸ್: ಹರಿಹರ ನಗರ ವ್ಯಾಪ್ತಿಯಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ವತಿಯಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದಾರೆ.

ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಿಂದ ಹರಪನಹಳ್ಳಿ ರಸ್ತೆ ಮಾರ್ಗವಾಗಿ ಗೂತ್ತೂರಿನವರೆಗೆ ಈ ಪ್ರತಿಭಟನಾ ಮೆರವಣಿಗೆ ನಡೆಯಲಿದೆ, ಗಾಡ ನಿದ್ದೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಎಚ್ಚರಿಸಬೇಕಾಗಿದೆ. ಇಂತಹ ದಪ್ಪ ಚರ್ಮದ ಅಧಿಕಾರಿಗಳಿಗೆ ಹೋರಾಟದ ಮೂಲಕವೇ ಎಚ್ಚರಿಸುವ ಕೆಲಸ ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ನಾಳೆ ನಮ್ಮ ಸಂಘಟನೆಯ ವತಿಯಿಂದ ಅಧಿಕಾರಿಗಳ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಹೋರಾಟ ನಡೆಸುತ್ತಿದ್ದೇವೆ. ಈ ಹೋರಾಟದಲ್ಲಿ ಪ್ರಜ್ಞಾವಂತ ನಾಗರಿಕರು, ವಾಹನ ಸವಾರರು, ಪಾದಾಚಾರಿಗಳು, ಹಾಗೂ ಗುಂಡಿ ಬಿದ್ದ ರಸ್ತೆಯಿಂದ ಅನಾಹುತಕ್ಕೆ ಒಳಗಾದ ನೊಂದ ಜೀವಗಳು ಪಾಲ್ಗೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಗೋವಿಂದ ಅವರು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಹೋರಾಟದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಸಾರ್ವಜನಿಕರ ಒಳಿತಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಜಯ ಕರ್ನಾಟಕ ಸಂಘಟನೆಯ ಹೋರಾಟದಲ್ಲಿ ಪ್ರಜ್ಞಾವಂತ ನಾಗರಿಕರು ಕೈ ಜೋಡಿಸಬೇಕಾಗಿದೆ. ಇದು ಅವರ ಸ್ವಾರ್ಥಕ್ಕಾಗಿ ಹೋರಾಟವಲ್ಲ. ಜನರಿಗಾಗಿ, ಜನರ ಒಳಿತಿಗಾಗಿ ಹೋರಾಟ ಮಾಡುತ್ತಿದ್ದಾರೆ, ಮಾಡಿಕೊಂಡು ಬಂದಿದ್ದಾರೆ. ಅವರೊಂದಿಗೆ ಕೈಜೋಡಿಸುವುದು ನಮ್ಮಗಳ ಜವಾಬ್ದಾರಿಯಾಗಿದೆ. ನಾಳೆ ಅವರೊಂದಿಗೆ ಎಲ್ಲರೂ ಸೇರೋಣ,ಹೋರಾಟದಲ್ಲಿ ಹೆಜ್ಜೆ ಹಾಕೋಣ,

Post a Comment

0 Comments