ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್‌ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳ ಲಾಗಿದೆ. ಕಳೆದ 4 ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ.
0 Comments