ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 69ನೇ ಮಹಾ ಪರಿನಿಬ್ಬಣ ಕಾರ್ಯಕ್ರಮ.

ಮಂದಾರ ನ್ಯೂಸ್, ಹರಿಹರ : ಇದೇ ದಿನಾಂಕ 6.12.2025ರಂದು ಬೆಳಗ್ಗೆ 11 ಗಂಟೆಗೆ ನಗರದ ಹೊರವಲಯದಲ್ಲಿರುವ ಪ್ರೊಫೆಸರ್ ಬಿ ಕೃಷ್ಣಪ್ಪ ಭವನ ( ಮೈತ್ರಿವನ) ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿಬ್ಬಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹರಿಹರ ತಾಲೂಕ್ ಘಟಕದ ಅಧ್ಯಕ್ಷರಾದ ಮಂಜುನಾಥ್ ಎಂ ಅವರು ಪತ್ರಿಕಾ ಹೇಳಿಕೆಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು. 

ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿಬ್ಬಣ ಸದ್ಭಾವನಾ ದಿನವನ್ನು ಮೌಡ್ಯ ವಿರೋಧಿ ಪರಿವರ್ತನಾ ದಿನವಾಗಿ ವೈಚಾರಿಕ ಬೆಳಕಿನೆಡೆಗೆ ಸಾಗೋಣ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹರಿಹರ ತಾಲೂಕು ಘಟಕದ ಅಧ್ಯಕ್ಷರಾದ ಮಂಜುನಾಥ್ ಎಂ  ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ . ಗ್ಯಾರೆಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಡಾ. ಎ.ಬಿ ರಾಮಚಂದ್ರಪ್ಪನವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗ ಹೆಗ್ಗೆರೆ ರಂಗಪ್ಪ, ರಾಜ್ಯ ಸಂಘಟನಾ ಸಂಚಾಲಕರು, ಕರ್ನಾಟಕ ದಲಿತ ಸಂಘರ್ಷ ಸಮಿತಿ.  ಕಬ್ಬಳ್ಳಿ ಮೈಲಪ್ಪ, ರಾಜ್ಯ ಸಂಘಟನಾ ಸಂಚಾಲಕರು, ಕರ್ನಾಟಕ ದಲಿತ ಸಂಘರ್ಷ ಸಮಿತಿ. ಯುವರಾಜ್ ಕಂಬಳಿ. ಉಪ ನಿರೀಕ್ಷಕರು, ಗ್ರಾಮಾಂತರ ಪೊಲೀಸ್ ಠಾಣೆ ಹರಿಹರ. ಎಂ.ಬಿ ಅಣ್ಣಪ್ಪ ದಲಿತ ಮುಖಂಡರು, ಸುಭಾಷ್ ಚಂದ್ರ ಬೋಸ್ ವಕೀಲರು ರಾಜನಹಳ್ಳಿ, ಅಂಜಿನಪ್ಪ, ಸೈಯದ್ ಎಜಾಜ್, ಕಳ್ಳೆರ್ ಮಂಜುನಾಥ್, ಸಂತೋಷ ಎಂ ನೋಟದವರ್, ಮಂಜಪ್ಪ ಜಿ.ಎಂ ರಾಜನಹಳ್ಳಿ, ಆನಂದ ಜಿಗಳಿ, ಸೇರಿದಂತೆ ಇನ್ನೂ ಅನೇಕ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಮೌಡ್ಯ ವಿರೋಧಿ ದಿನದ ಕುರಿತು ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿಜಯಕುಮಾರ್ ಅವರು ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮಾನವ ಬಂಧುತ್ವ ವೇದಿಕೆಯ ಹರಿಹರ ತಾಲೂಕು ಸಂಚಾಲಕರಾದ ಮಂಜುನಾಥ್ ದೊಡ್ಮನೆ ಅವರು ಗಣ್ಯ ವ್ಯಕ್ತಿಗಳನ್ನು ಸ್ವಾಗತಿಸುವರು, ನಿರೂಪಣೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಾಧ್ಯಮ ಸಲಹೆಗಾರರಾದ ಪ್ರಕಾಶ್ ಮಂದಾರ ಅವರು ನಡೆಸಿಕೊಡಲಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹರಿಹರ ತಾಲೂಕು ಘಟಕದ ಸಂಚಾಲಕರಾದ ಮಂಜುನಾಥ್ ಅವರು  ಪತ್ರಿಕಾ ಹೇಳಿಕೆಯಲ್ಲಿ ನಾಳೆಯ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು. 

ಈ ಸಂದರ್ಭದಲ್ಲಿ ಮಂಜಪ್ಪ ಜಿ.ಎಂ ಸಂಚಾಲಕರು,ಕರ್ನಾಟಕ ದಲಿತ ಸಂಘರ್ಷ ಸಮಿತಿ. ತಾಲೂಕು ಘಟಕ ಹರಿಹರ. ಮಂಜುನಾಥ್ ದೊಡ್ಮನೆ. ಮಾನವ ಬಂಧುತ್ವ ವೇದಿಕೆ ಸಂಚಾಲಕರು. ತಾಲೂಕು ಘಟಕ ಹರಿಹರ. ವಿಶ್ವ ಬೇವಿನಹಳ್ಳಿ, ಸೇರಿದಂತೆ  ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments