ದಾವಣಗೆರೆ: ಜಿಲ್ಲೆಯ ಬುಳ್ಳಾಪುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಶ್ರೀ ಹೊನ್ನತ್ತೆಮ್ಮ ದೇವಿ ಅವರ ಜಾತ್ರಾ ಮಹೋತ್ಸವವನ್ನು ಸುಮಾರು 19 ವರ್ಷಗಳ ನಂತರ ಅದ್ದೂರಿಯಾಗಿ ಆಚರಿಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ. ಈ ಜಾತ್ರೆ ಮಾರ್ಚ್ 10 ರಿಂದ 13 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜಾತ್ರೆಯ ಅಂಗವಾಗಿ ಮಾರ್ಚ್ 10ರಂದು ದೇವಿಯ ಪುರ ಪ್ರವೇಶ ಕಾರ್ಯಕ್ರಮ ಪೂರ್ಣಕುಂಭ ಸ್ವಾಗತದೊಂದಿಗೆ ನಡೆಯಲಿದ್ದು, ಸಂಜೆ ವೇಳೆಗೆ ಉಡಿತುಂಬುವ ಕಾರ್ಯಕ್ರಮ ನಡೆಯಲಿದೆ.
ಮಾರ್ಚ್ 11ರಂದು ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿಸಲ್ಪಟ್ಟು, ಭಕ್ತರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 12ರಂದು ದೇವಿಯನ್ನು ವಿಶೇಷ ಅಲಂಕಾರದೊಂದಿಗೆ ಪೀಠದಲ್ಲಿ ಕೂರಿಸುವ ಕಾರ್ಯಕ್ರಮ ನಡೆಯಲಿದೆ.
ಮಾರ್ಚ್ 13ರಂದು (ಶುಕ್ರವಾರ) ಗ್ರಾಮಸ್ಥರ ಸಹಭಾಗಿತ್ವದಲ್ಲಿ ಮಹಾಮಂಗಳಾರತಿ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಭಕ್ತಿ ಭಾವದಿಂದ ಸಮಾರೋಪ ಮಾಡಲಾಗುತ್ತದೆ.
ಗ್ರಾಮದ ಪ್ರಮುಖರು ಹಾಗೂ ಜಾತ್ರಾ ಸಮಿತಿ ಸದಸ್ಯರು ಭಕ್ತಾಧಿಗಳಿಗೆ ಮನವಿ ಮಾಡಿದ್ದು, ತನು-ಮನ-ಧನದೊಂದಿಗೆ ಸಹಕರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.
ಸುಮಾರು ಎರಡು ದಶಕಗಳ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮಸ್ಥರಲ್ಲಿ ಅಪಾರ ಸಂತೋಷ ಹಾಗೂ ಭಕ್ತಿಭಾವ ಮೂಡಿಸಿದೆ.
ಜಾತ್ರಾ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದಲೂ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ವರದಿ: ಜಿ ಎಂ ಪ್ರಸನ್ನ ಕೊಂಡಜ್ಜಿ.
ಪತ್ರಿಕಾ ವರದಿಗಾರರು.
0 Comments