ಮಂದಾರ ಜ್ವಾಲೆ : ಹರಿಹರ ತಾಲೂಕು ಕಸಬಾ ಹೋಬಳಿ ಚಿಕ್ಕಬಿದರಿ ಗ್ರಾಮದಲ್ಲಿ ಶಿವಪ್ಪ (44) ಎಂಬ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುತ್ತಾರೆ. ಮೃತ ವ್ಯಕ್ತಿಯ ಸಾವಿನ ಕುರಿತು ಸಾರ್ವಜನಿಕರು ಅನುಮಾನದಿಂದ ಮಾತನಾಡುತ್ತಿದ್ದಾರೆ.ಸಾವಿನ ಕುರಿತು ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿ ಶಿವಪ್ಪ ಅವರ ಮನೆಯ ಹಿಂಬದಿಯಲ್ಲಿ ಕಲ್ಲಿನ ಮೇಲೆ ಬಿದ್ದಿರುವ ರೀತಿಯಲ್ಲಿ ಶವ ಪತ್ತೆಯಾಗಿರುತ್ತದೆ. ತಲೆಗೆ ಬಿದ್ದ ಪೆಟ್ಟಿನಿಂದ ಅಧಿಕ ರಕ್ತಸ್ರಾವವಾಗಿದ ದೃಶ್ಯಗಳು ಕಂಡು ಬಂದವು. ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು, ಬೆರಳಚ್ಚು ತಜ್ಞರು ಸಾವಿನ ಕುರಿತು ಸಾಕ್ಷಾಧಾರಗಳನ್ನು ಸಂಗ್ರಹಿಸುವ ಕೆಲಸಕ್ಕೆ ಮುಂದಾದರು. ಸಾರ್ವಜನಿಕರ ವಲಯದಲ್ಲಿ ಹರುದಾಡುತ್ತಿರುವ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಮೂಲಕ ಉತ್ತರ ಸಿಗಬೇಕಾಗಿದೆ.
0 Comments