ಹರಿಹರ: ಶಾಸಕರಾದ ಶ್ರೀ ಬಿಪಿ ಹರೀಶ್ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ, ಇಲಾಖೆಗಳ ಪ್ರಗತಿ ಪರಿಶೀಲನೆ.


🔥ಮಂದಾರ ಜ್ವಾಲೆ: ಹರಿಹರ, ಜೂನ್ 30: ಹರಿಹರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಶ್ರೀ ಬಿ.ಪಿ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ) ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿವಾರು ವರದಿಯನ್ನು ಮಂಡಿಸಿ, ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ನೀಡಿದರು. ಈ ವೇಳೆ ಶಾಸಕರಾದ ಬಿ.ಪಿ. ಹರೀಶ್ ಅವರು ಇಲಾಖೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹರಿಹರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು, ನಗರಸಭೆ ಪೌರಾಯುಕ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಣೆ ಕುರಿತು ಚರ್ಚೆ ನಡೆಯಿತು.


Post a Comment

0 Comments