ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಎನ್. ಸತೀಶ್ ಕುಮಾರ್ ಅಧಿಕಾರ ಸ್ವೀಕಾರ.!


ಹರಿಹರ: ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಎನ್. ಸತೀಶ್ ಕುಮಾರ್, ಐಪಿಎಸ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ನೂತನ ಪೊಲೀಸ್ ಮಹಾ ನಿರೀಕ್ಷಕರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್.ಟಿ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೂರ್ವ ವಲಯದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಜವಾಬ್ದಾರಿ ನೂತನ ಪೊಲೀಸ್ ಮಹಾ ನಿರೀಕ್ಷಕರ ಮೇಲಿದೆ. ಅಧಿಕಾರ ಸ್ವೀಕಾರದ ಬಳಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ವಲಯದ ಪೊಲೀಸ್ ವ್ಯವಸ್ಥೆಯ ಕುರಿತು ಮಾಹಿತಿ ಪಡೆಯುವ ನಿರೀಕ್ಷೆಯಿದೆ.

Post a Comment

0 Comments