ದಾವಣಗೆರೆ: ಸಾಹಿತ್ಯ ಎಂ. ಆಲದಕಟ್ಟಿ, ಭಾ.ಆ.ಸೇ. ಅವರು ಇಂದು ದಾವಣಗೆರೆ ಜಿಲ್ಲಾ ಪಂಚಾಯತ್ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ನ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಆತ್ಮೀಯವಾಗಿ ಅಭಿನಂದಿಸಿ ಶುಭ ಹಾರೈಸಿದರು.
ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಂಕ್ಷಿಪ್ತವಾಗಿ ಚರ್ಚಿಸಿದ ಸಾಹಿತ್ಯ ಎಂ. ಆಲದಕಟ್ಟಿ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜನಪರ ಸೇವೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಸಲಹೆ ನೀಡಿದರು.
ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧಿಕಾರ ಸ್ವೀಕಾರದೊಂದಿಗೆ ದಾವಣಗೆರೆ ಜಿಲ್ಲಾ ಪಂಚಾಯತ್ ಆಡಳಿತಕ್ಕೆ ಹೊಸ ಚೈತನ್ಯ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.
– ಮಂದಾರ ನ್ಯೂಸ್ ವೆಬ್ ಪೋರ್ಟಲ್
0 Comments