ಹರಿಹರ ಜೆಡಿಎಸ್ ಸಾಮಾಜಿಕ ಜಾಲತಾಣಕ್ಕೆ ಹೊಸ ಸಾರಥಿ! ಬಿ. ಮಂಜು ಸಾರಥಿ ಅವರಿಗೆ ತಾಲೂಕು ಗ್ರಾಮಾಂತರ ಘಟಕದ ಅಧ್ಯಕ್ಷ ಪಟ್ಟ.


ತಾಲೂಕು ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ನೇಮಕ; ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ

ಹರಿಹರ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ದಾವಣಗೆರೆ ಜಿಲ್ಲೆ ,ಹರಿಹರ ತಾಲೂಕು ಸಾಮಾಜಿಕ ಜಾಲತಾಣ ವಿಭಾಗದ ತಾಲೂಕು ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಬಿ. ಮಂಜು ಸಾರಥಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಬಿ. ಚಿದಾನಂದಪ್ಪ ಅವರು 2026ರ ಅಕ್ಟೋಬರ್ 3ರಂದು ಹೊರಡಿಸಿರುವ ನೇಮಕಾತಿ ಪತ್ರದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ಪತ್ರದಲ್ಲಿ, ಹರಿಹರ ತಾಲೂಕು ಸಾಮಾಜಿಕ ಜಾಲತಾಣ ವಿಭಾಗದ “ತಾಲೂಕು ಗ್ರಾಮಾಂತರ ಘಟಕದ ಅಧ್ಯಕ್ಷ”ರನ್ನಾಗಿ ಬಿ. ಮಂಜು ಸಾರಥಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವಂತೆ, ತಾಲೂಕು ಜನತಾದಳ (ಜಾತ್ಯತೀತ) ಪಕ್ಷದ ಸಾಮಾಜಿಕ ಜಾಲತಾಣ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ನೇಮಕಾತಿ ಪತ್ರದಲ್ಲಿ ಸೂಚಿಸಲಾಗಿದೆ.

ಹರಿಹರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಚಟುವಟಿಕೆಗಳನ್ನು ಸಂಘಟಿಸುವುದು, ಪಕ್ಷದ ವಿಚಾರಧಾರೆ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಮತ್ತು ಕಾರ್ಯಕರ್ತರನ್ನು ಸಾಮಾಜಿಕ ಜಾಲತಾಣದ ಮೂಲಕ ಮತ್ತಷ್ಟು ಸಕ್ರಿಯಗೊಳಿಸುವ ಜವಾಬ್ದಾರಿ ನೂತನ ಅಧ್ಯಕ್ಷ ಬಿ. ಮಂಜು ಸಾರಥಿ ಅವರ ಮೇಲಿದೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ನೇಮಕಾತಿ ಪತ್ರವನ್ನು ನೀಡುವ ಮೂಲಕ ಮಂಜು ಸಾರಥಿ ಅವರಿಗೆ ಸಾಮಾಜಿಕ ಜಾಲತಾಣದ ಹೊಸ ಜವಾಬ್ದಾರಿಯನ್ನ ನೀಡಿದ್ದಾರೆ. ಮಂಜು ಸಾರಥಿ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ.

ಬಿ. ಮಂಜು ಸಾರಧಿ, ಬಿನ್ ಬಸವರಾಜಪ್ಪ ಬಿ. ಸಾರಧಿ ಅವರಿಗೆ ಈ ನೇಮಕಾತಿ ಪತ್ರವನ್ನು ನಿಖಿಲ್ ಕುಮಾರಸ್ವಾಮಿ ಅವರು ನೀಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರಿಗೆ ಜೆಡಿಎಸ್ ನಲ್ಲಿ ಅವಕಾಶ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 

ಸಾಮಾಜಿಕ ಜಾಲತಾಣದ ಹರಿಹರ ತಾಲೂಕು ಘಟಕದ ಅಧ್ಯಕ್ಷರಾಗಿ ಮಂಜು ಸಾರಥಿ ಅವರಿಗೆ ನೇಮಕಾತಿ ಪತ್ರವನ್ನು ನೀಡುವ ಸಂದರ್ಭದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಚ್ಎಸ್ ಶಿವಶಂಕರ್ ಅವರು ಉಪಸ್ಥಿತರಿದ್ದರು.

Post a Comment

0 Comments